ಕುಂಟುತ್ತಾ ಸಾಗುತ್ತಿರುವ ಕಾಂಗ್ರೆಸ್ ಹಾಗೂ ಜನತಾದಳ ಮೈತ್ರಿ ಸರ್ಕಾರದಲ್ಲಿ ಇದೀಗ ಮೊದಲ ವಿಕೆಟ್ ಪತನವಾಗಿದೆ. ಮೈತ್ರಿ ಸರ್ಕಾರದ ಕಾರ್ಯಚಟುವಟಿಕೆಗೆ ಬೇಸತ್ತು ಸಚಿವ ಸ್ಥಾನಕ್ಕೆ ಬಿ.ಎಸ್.ಪಿ. ಸಚಿವ ರಾಜೀನಾಮೆ ನೀಡಿದ್ದಾರೆ.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ರಮೇಶ್ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಹುಜನ ಸಮಾಜವಾದಿ ಪಕ್ಷದ, ಅಂದರೆ ಉತ್ತರ ಪ್ರದೇಶದ ಮಾಯಾವತಿಯ ಪಕ್ಷದ ಸಚಿವ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಮುಖ್ಯಮಂತ್ರಿ ಕುಮರಸ್ವಾಮಿ ಹಾಗೂ ರಾಜ್ಯಪಾಲ ವಜುಬಾಯಿ ವಾಲಾರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಮಾಯಾವತಿ ಕಾಂಗ್ರೆಸ್ ವಿರುದ್ಧ ಕೆಂಡ ಕಾರಿದ್ದರು. ಕಾಂಗ್ರೆಸ್ ಜೊತೆ ಯಾವುದೇ ಕಾರಣಕ್ಕೂ ಹೋಗೋದಿಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ ಕರ್ನಾಟಕದಲ್ಲಿ ತನ್ನ ಪಕ್ಷದ ಓರ್ವ ಶಾಸಕ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸಚಿವರಾಗಿದ್ದರು. ಆದರೆ ಈ ಸ್ಥಾನಕ್ಕೆ ಇದೀಗ ರಾಜೀನಾಮೆ ನೀಡಿದ್ದಾರೆ.
ಕೊಳ್ಳೇಗಾಲ ಕ್ಷೇತ್ರದಿಂದ ಜನತಾದಳದ ಬೆಂಬಲದಿಂದ ಗೆದ್ದು ಬಂದಿರುವ ಎನ್.ರಮೇಶ್ ಇದೀಗ ರಾಜೀನಾಮೆ ನೀಡಿರುವ ಶಾಸಕರಾಗಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಕೇವಲ ತಾನು ಗೆದ್ದು ಬಂದ ಪಕ್ಷದಿಂದ ಶಾಸಕನಾಗಿರಲು ನಿರ್ಧರಿಸಿದ್ದಾರೆ. ಒಟ್ಟಾರೆ ಮೈತ್ರಿ ಸರ್ಕಾರ ಸಂಕಷ್ಟದಲ್ಲಿರುವಾಗಲೇ ಮೊದಲ ವಿಕೆಟ್ ಪತನವಾಗಿದ್ದು ಮೈತ್ರಿ ಸರ್ಕಾರಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
-ಏಕಲವ್ಯ