ಪ್ರಚಲಿತ

ಕಾಂಗ್ರೆಸ್ ಕಾರ್ಯಕರ್ತರಿಂದಲೇ ಮೋದಿ ಮೋದಿ ಘೋಷಣೆ.! ಸಭೆಯಲ್ಲೇ ತೀವ್ರ ಮುಜುಗರ ಅನುಭವಿಸಿದ ಕಾಂಗ್ರೆಸ್ ನಾಯಕರು!

ಅಭಿವೃದ್ಧಿಯ ಮೂಲಕ ಮ್ಯಾಜಿಕ್ ಮಾಡಿರುವ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕೋಟ್ಯಾಂತರ ಭಾರತೀಯ ಹಾಟ್ ಫೇವರೀಟ್. ಕೇವಲ ವಿರೋಧಿಸಬೇಕು ಎನ್ನುವ ಕಾರಣಕ್ಕಾಗಿಯೇ ಕೆಲವರು ಮೋದಿಯವರನ್ನು ವ್ಯಯಕ್ತಿಕವಾಗಿ ವಿರೋಧಿಸುತ್ತಿದ್ದಾರೆಯೇ ಹೊರತು ಇನ್ನಾವ ವಿಚಾರದಲ್ಲೂ ಮೋದಿಯವರನ್ನು ವಿರೋಧಿಸಲು ವಿಪಕ್ಷಗಳ ಬಳಿ ಅಸ್ತ್ರವಿಲ್ಲ. ಅದೆಷ್ಟೋ ಬಾರಿ ವಿರೋಧ ಪಕ್ಷಗಳ ಸಭೆಗಳಲ್ಲಿ ಮೋದಿ ಪರವಾದ ಘೋಷಣೆ ಕೇಳಿ ಬಂದಿದ್ದೂ ಇದೆ. ಇದೀಗ ಅಂತದ್ದೇ ಮತ್ತೊಂದು ಘಟನೆ ನಡೆದಿದ್ದು ಕಾಂಗ್ರೆಸ್ ನಾಯಕರು ತೀವ್ರ ಮುಜುಗರ ಅನುಭವಿಸುವಂತಾಗಿದೆ.

ಚನ್ನರಾಯ ಪಟ್ಟಣದಲ್ಲಿ ಮಾಜಿ ಶಾಸಕ ಸಿಎಸ್ ಪುಟ್ಟೇಗೌಡರ ಮನೆಯಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಸಭೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡರು ಭಾಷಣಕ್ಕೆ ಇಳಿದಿದ್ದರು. ಈ ವೇಳೆ ಸಿಡಿದೆದ್ದ ಕಾರ್ಯಕರ್ತರು ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದಾರೆ. ಮೋದಿ ಚಿತ್ರವನ್ನು ಹಿಡಿದುಕೊಂಡು “ನೀವು ಕಾಂಗ್ರೆಸ್ ಕಾರ್ಯಕರ್ತರ ಭಾವನೆಯನ್ನು ಧಿಕ್ಕರಿಸಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೀರಿ.ನಾವು ಕಾಂಗ್ರೆಸ್ ಪಕ್ಷ ಬೆಂಬಲಿಸಿದ ಜೆಡಿಎಸ್ ಪಕ್ಷಕ್ಕೆ ಮತ ಹಾಕೋದಿಲ್ಲ. ನಾವೇನಿದ್ದರೂ ಬಿಜೆಪಿಗೆ ಮತ ಹಾಕುತ್ತೇವೆ” ಎಂದು ಘೋಷಣೆ ಕೂಗಿದ್ದಾರೆ.

ಈ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಪರಸ್ಪರ ತಳ್ಳಾಟ ನೂಕಾಟ ಆರಂಭಿಸಿದ ಕಾಮರ್ಯಕರ್ತರು ಹಾಗೂ ಮುಖಂಡರು ನಂತರ ಕುರ್ಚಿಗಳನ್ನು ಬಿಸಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಮನವೊಲಿಸಲು ಮುಖಂಡರು ಹರಸಾಹಸ ಪಟ್ಟಿದ್ದಾರೆ.

ಇಡೀ ದೇಶದಲ್ಲೇ ಇಂತಹಾ ಬದಲಾವಣೆಗಳು ನಡೆಯುತ್ತಿದ್ದು ಕರ್ನಾಟಕದಲ್ಲಿ ವಿಶೇಷವಾಗಿ ಜೆಡಿಎಸ್ ಜೊತೆ ಹೊಂದಾಣಿಕೆಯ ರಾಜಕೀಯಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರು ಸಿಡಿಮಿಡಿಗೊಂಡಿದ್ದಾರೆ. ಇದು ಮುಂದಿನ ಲೋಕಸಭಾ ಚುನಾವಣೆಯಲ್ಲೂ ಪ್ರತಿಧ್ವನಿಸುತ್ತದೆ ಅನ್ನೋದ್ರಲ್ಲಿ ಯಾವುದೇ ಅನುಮಾನವಿಲ್ಲ.

-ಸುನಿಲ್ ಪಣಪಿಲ

Tags

Related Articles

FOR DAILY ALERTS
 
FOR DAILY ALERTS
 
Close