ಪ್ರಚಲಿತ

ಸಿದ್ದರಾಮಯ್ಯ ವಿರುದ್ಧ ದೇವೇಗೌಡರಿಂದ ದೂರು! ಮೈತ್ರಿ ಸರಕಾರದಲ್ಲಿ ಅಡ್ಡಗಾಲು ಹಾಕುತ್ತಿರುವುದೇ ಸಿದ್ದರಾಮಯ್ಯ ಎಂದ ದೊಡ್ಡೇಗೌಡರು!

ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡಿ ಹತ್ತಿರ ಹತ್ತಿರ ಒಂದು ವರ್ಷ ಆಗುತ್ತಾ ಬಂದರೂ ಕೂಡ ಇನ್ನೂ ಈ ಎರಡೂ ಪಕ್ಷಗಳ ನಾಯಕರ ಕಿತ್ತಾಟ ಮಾತ್ರ ಕಡಿಮೆ ಆಗುತ್ತಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಅಸಮಧಾನ ಇದೀಗ ತಾರಕಕ್ಕೇರಿದ್ದು, ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಗರಂ ಆದ ಜೆಡಿಎಸ್ ವರಿಷ್ಠ ದೇವೇಗೌಡರು ನೇರವಾಗಿ ಕಾಂಗ್ರೆಸ್ ಹೈಕಮಾಂಡ್‌ಗೆ ದೂರು ನೀಡಿದ್ದಾರೆ.

ಕುಮಾರಸ್ವಾಮಿ ಅವರ ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿರುವ ದೇವೇಗೌಡರು ಮತ್ತು ಇತರ ನಾಯಕರಿಗೆ ಇದೀಗ ಉಳಿದಿರುವುದು ಕಾಂಗ್ರೆಸ್ ಹೈಕಮಾಂಡ್ ಮಾತ್ರ. ಯಾಕೆಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಣದ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ “ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ” ಎಂದು ಈಗಾಗಲೇ ಹೇಳಿಕೊಂಡಿದ್ದು, ಕುಮಾರಸ್ವಾಮಿ ಅವರಿಗೆ ತಲೆ ನೋವು ತರಿಸಿದೆ. ಒಂದೆಡೆ ಅತೃಪ್ತ ಶಾಸಕರು ಪಕ್ಷ ಬಿಡುವ ಮುನ್ಸೂಚನೆ ನೀಡಿದ್ದು, ಯಾವ ಸಂದರ್ಭದಲ್ಲಿ ಬೇಕಾದರೂ ಸರಕಾರ ಉರುಳುವ ಸಾಧ್ಯತೆ ಇದೆ. ಇದರ ಮಧ್ಯೆ ಇದೀಗ ದೇವೇಗೌಡರು ಕೂಡ ಕಾಂಗ್ರೆಸ್ ವಿರುದ್ಧ ಕೆಂಡಾಮಂಡಲವಾಗಿದ್ದು, ಸಿದ್ದರಾಮಯ್ಯನವರ ಬಣದ ವಿರುದ್ಧ ಕ್ರಮ ಕೈಗೊಳ್ಳಲು ಹೈಕಮಾಂಡ್‌ಗೆ ದೂರು ನೀಡಿದ್ದಾರೆ.!

ಸಿದ್ದರಾಮಯ್ಯ ಬಣದ ವಿರುದ್ಧ ಕಠಿಣ ಕ್ರಮಕ್ಕೆ ದೇವೇಗೌಡರಿಂದ ದೂರು!

ಕಾಂಗ್ರೆಸ್‌ನ ಒತ್ತಡ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಯಾತಕ್ಕಾಗಿ ಈ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೋ ಎಂದು ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ ಮಾತ್ರವಲ್ಲದೆ ನನಗೆ ಅಧಿಕಾರನೂ ಬೇಡ ಏನೂ ಬೇಡ ಈಗಲೇ ರಾಜೀನಾಮೆ ನೀಡಿ ಹೊರ ಹೋಗಲು ಸಿದ್ಧ ಎಂದು ಹೇಳಿಕೊಂಡಿದ್ದು, ಇದೀಗ ಮಗನ ಕುರ್ಚಿ ಉಳಿಸಿಕೊಳ್ಳಲು ಸ್ವತಃ ದೇವೇಗೌಡರು ಎಂಟ್ರಿ ಕೊಟ್ಟಿದ್ದಾರೆ. ನೇರವಾಗಿ ಕಾಂಗ್ರೆಸ್ ಹೈಕಮಾಂಡ್‌ಗೆ ದೂರು ನೀಡಿದ ದೇವೇಗೌಡರು, ರಾಜ್ಯದಲ್ಲಿ ಸಿದ್ದರಾಮಯ್ಯ ಬಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಬಣ ಮೈತ್ರಿ ಸರಕಾರವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ, ರಾಜ್ಯದಲ್ಲಿ ಸರಿಯಾದ ಆಡಳಿತ ನಡೆಸಬೇಕಾದರೆ ಮೈತ್ರಿ ಸರಕಾರ ಉಳಿಯಬೇಕು. ಆದರೆ ಸಿದ್ದರಾಮಯ್ಯನವರು ತಮ್ಮ ಬೆಂಬಲಿಗರಿಂದ ಸರಕಾರಕ್ಕೆ ತೊಂದರೆ ನೀಡುತ್ತಿದ್ದಾರೆ, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಹೈಕಮಾಂಡ್, ಕಾಂಗ್ರೆಸ್ ಶಾಸಕರಿಗೆ ಹೊಸ ಸೂಚನೆ ಹೊರಡಿಸಿದೆ.!

ಯಾವುದೇ ಕಾರಣಕ್ಕೂ ಬೇಜವಾಬ್ದಾರಿಯುವ ಹೇಳಿಕೆ ಅಥವಾ ಪಕ್ಷಕ್ಕೆ ಹಿನ್ನಡೆಯಾಗುವಂತಹ ಹೇಳಿಕೆಗಳನ್ನು ನೀಡಬಾರದು ಮತ್ತು ಮೈತ್ರಿ ಸರಕಾರಕ್ಕೆ ತೊಂದರೆಯಾಗುವ ರೀತಿಯಲ್ಲಿ ಯಾರೂ ನಡೆದುಕೊಳ್ಳುಬಾರದು ಎಂಬ ಖಡಕ್ ಸೂಚನೆ ನೀಡಿದ ರಾಹುಲ್ ಗಾಂಧಿ, ಅತೃಪ್ತ ಶಾಸಕರ ಸಂಧಾನಕ್ಕೂ ಮುಂದಾಗಿದ್ದಾರೆ. ಈಗಾಗಲೇ ಕೆಲ ಅತೃಪ್ತ ಶಾಸಕರು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಮಾತು ಕೇಳಿ ಬಂದಿದ್ದು, ಇತ್ತ ಅತೃಪ್ತ ಶಾಸಕರು ಸರಕಾರಕ್ಕೆ ಎಚ್ಚರಿಕೆ ಕೂಡ ನೀಡಿದ್ದಾರೆ.!

-ಅರ್ಜುನ್

Tags

Related Articles

FOR DAILY ALERTS
 
FOR DAILY ALERTS
 
Close