ಪ್ರಚಲಿತ

ಮತ್ತೊಮ್ಮೆ ನಡೆದಿತ್ತು ಐಟಿ ರೇಡ್.! ಕಾಂಗ್ರೆಸ್ಸಿನ ತಿಮಿಂಗಳ ಮನೆಯಲ್ಲಿ ಸಿಕ್ತು ಲಕ್ಷ ಲಕ್ಷ ಹಣ.!

ಲೋಕಸಭಾ ಚುನಾವಣೆ ಕಾವೇರುತ್ತಿದ್ದಂತೆ ಅಭ್ಯರ್ಥಿಗಳು ಹಾಗೂ ರಾಜಕೀಯ ನಾಯಕರ ಮೇಲೆ ಹದ್ದಿನ ಕಣ್ಣಿಟ್ಟಿರುವ ಆದಾಯ ಇಲಾಖಾ ಅಧಿಕಾರಿಗಳು ಕರ್ನಾಟಕದಲ್ಲಿ ಮತ್ತೆ ಭರ್ಜರಿ ದಾಳಿ ನಡೆಸಿ ಲಕ್ಷ ಲಕ್ಷ ಹಣಗಳನ್ನು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆಪ್ತ ಸಂಬಂಧಿ ಪರಮೇಶ್ ಎಂಬಾತನ ಮನೆಯ ಮೇಲೆ ದಾಳಿ ನಡೆಸಿದ್ದ ಐಟಿ ಇಲಾಖೆ ಇದೀಗ ಮತ್ತೆ ದಾಳಿ ಮುಂದುವರೆಸಿದೆ.

ಇದೀಗ ಮತ್ತೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿಯನ್ನು ಐಟಿ ಅಧಿಕಾರಿಗಳೇ ನೀಡಿದ್ದಾರೆ. ಕರ್ನಾಟಕದಲ್ಲಿ ಒಟ್ಟು 23 ಕಡೆ ಐಟಿ ದಾಳಿ ನಡೆಸಿದೆ ಎಂದು ಮಾಹಿತಿ ನೀಡಿದ್ದಾರೆ. ಈ ವೇಳೆ ಅಪಾರ ಮೌಲ್ಯದ ಹಣ ಹಾಗೂ ಚಿನ್ನಾಭರಣಗಳನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಆಪ್ತರ ಮನೆಗೂ ಐಟಿ ದಾಳಿ ನಡೆದಿದೆ. ರಿಜ್ವಾನ್ ಅರ್ಷದ್ ಅವರ ಮೂವರು ಆಪ್ತರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಹುಬ್ಬಳ್ಳಿ, ಗದಗ, ಬಳ್ಳಾರಿ ಸೇರಿದಂತೆ ಅನೇಕ ಕಡೆಗಳಲ್ಲಿ ದಾಳಿ ನಡೆದಿದ್ದು 45 ಕೋಟಿಗೂ ಅಧಿಕ ಅಕ್ರಮ ಆಸ್ತಿ, 23 ಕೋಟಿಗೂ ಮಿಕ್ಕ ಹಣ ಹಾಗೂ ಅಪಾರ ಪ್ರಮಾಣದ ಚಿನ್ನಾಭರಣಗಳು ಪತ್ತೆಯಾಗಿದೆ.

ಬೆಳಗಾವಿ, ಚಿಕ್ಕೋಡಿ ಅಹಿತ ಮತ್ತೆ ಹಲವು ಕಡೆಗಳಲ್ಲಿ ಐಟಿ ದಾಳಿ ನಡೆದಿದ್ದು ಮಟ್ಕಾ ದಂಧೆ, ಅಕ್ರಮ ಮದ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಒಟ್ಟಾರೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಐಟಿ ಅಧಿಕಾರಿಗಳು ಸಖತ್ ಭೇಟೆ ಮುಂದುವರಿಸಿದ್ದು ಸಿಕ್ಕ ಸಿಕ್ಕಲ್ಲೆಲ್ಲಾ ಕೋಟಿಗಳ ಕಂತೆಯೇ ಕಾಣುತ್ತಿರುವುದು ಭ್ರಷ್ಟ ರಾಜಕಾರಣಿಗಳಿಗೆ ನಿದ್ದೆಗೆಡಿಸಿದೆ.

-ಏಕಲವ್ಯ

Tags

Related Articles

FOR DAILY ALERTS
 
FOR DAILY ALERTS
 
Close