ಪ್ರಚಲಿತ

ರಾಜ್ಯಕ್ಕೆ ಲಗ್ಗೆ ಇಡಲಿದ್ದಾರೆ ಪ್ರಧಾನಿ ಮೋದಿ..! ಪ್ರಮಾಣ ವಚನಕ್ಕೆ ಸಾಕ್ಷಿಯಾಗಲಿದ್ದಾರಂತೆ ನಮೋ..!

10K Shares

 ಜಿದ್ದಿಗೆ ಬಿದ್ದು ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರದ ಗದ್ದುಗೆಗೆ ಏರಿಸಿಯೇ ಸಿದ್ದ ಎಂದು ಪಣ ತೊಟ್ಟಿದ್ದ ಪ್ರಧಾನಿ ನರೇಂದ್ರ ಮೋದಿ ಇದೀಗ ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಈ ಬಾರಿ ಬಿಜೆಪಿ ಎಂಬ ಸೂತ್ರ ಸಕ್ಸಸ್ ಆಗಲಿದೆ. 

ಅತಂತ್ರ ಸರ್ಕಾರ ಬಂದಂತಹ ಹಿನ್ನೆಯಲ್ಲಿ ಕಾಂಗ್ರೆಸ್ ಹಾಗೂ ಜನತಾ ದಳ ಸೇರಿಕೊಂಡು ಸರ್ಕಾರ ರಚಿಸುವುದಾಗಿ ತೀರ್ಮಾನ ನಡೆಸಿದ್ದವು. ಆದರೆ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಭಾರತೀಯ ಜನತಾ ಪಕ್ಷ ನಾವೇ ಸರ್ಕಾರ ರಚಿಸೋದು ಎಂಬ ಜಿದ್ದಿಗೆ ಬಿದ್ದಿತ್ತು. ಮಾತ್ರವಲ್ಲದೆ ಭಾರತೀಯ ಜನತಾ ಪಕ್ಷದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚಿಸುತ್ತೇವೆ ಅವಕಾಶ ನೀಡಿ ಎಂಬ ಮನಬವಿಯನ್ನೂ ಮಾಡಿತ್ತು.

ಅದರಂತೆಯೇ ಭಾರತೀಯ ಜನತಾ ಪಕ್ಷಕ್ಕೆ ರಾಜ್ಯಪಾಲರು ಅವಕಾಶವನ್ನು ನೀಡಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ಚುನಾವಣೆ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಸುದ್ದಿಗೋಷ್ಟಿ ನಡೆಸಿ ಸರ್ಕಾರ ನಮ್ದೇ ಎಂದು ಹೇಳಿದ್ದಾರೆ. ಯಾರೂ ಗೊಂದಲ ಮಾಡಿಕೊಳ್ಳುವುದು ಬೇಡ. ನಾಳೆ  ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಪ್ರಮಾಣ ವಚನ ಸ್ವೀಕಾರ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕಕ್ಕೆ ಬರಲಿದ್ದಾರಂತೆ ನಮೋ..!

ಇದೀಗ ಸುದ್ಧಿ ಮಾಧ್ಯಮಗಳ ಹಾಗೂ ಭಾರತೀಯ ಜನತಾ ಪಕ್ಷದ ಮೂಲಗಳ ಪ್ರಕಾರ ನಾಳೆ ಕರ್ನಾಟಕಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಬಿಎಸ್ ಯಡಿಯೂರಪ್ಪನವರು ನಾಳೆ ಬಹುತೇಕ ಪ್ರಮಾಣ ವಚನ ಸ್ವೀಕರಿಸಲಿದ್ದು ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

Image result for modi in crowd

ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ವಿಧಾನ ಸಭೆಯ ಚುನಾವಣಾ ಪ್ರಚಾರಕ್ಕಾಗಿ ನರೇಂದ್ರ ಮೋದಿಯ ಕೆಲಸವೇ ಸಖತ್ ವರ್ಕೌಟ್ ಆಗಿದೆ ಅನ್ನೋದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ. ಯಾಕೆಂದರೆ ಅಲ್ಪ ದಿನಗಳಲ್ಲೇ ಬರೋಬ್ಬರಿ 21 ಚುನಾವಣಾ ಜಾಥಾವನ್ನು ನಡೆಸಿ 35 ಲಕ್ಷಕ್ಕೂ ಅಧಿಕ ಮಂದಿಯನ್ನು ಉದ್ಧೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿಯವರು ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಈ ಪ್ರಮಾಣದಲ್ಲಿ ಗೆಲ್ಲಲು ಸಾಧ್ಯವಾಗಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಚಾಣಾಕ್ಯತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಕೇಂದ್ರ ಸಚಿವರುಗಳ ಚುನಾವಣಾ ಪ್ರಚಾರ ಭಾರತೀಯ ಜನತ ಪಕ್ಷವನ್ನು ಈ ಹಂತದ ಸ್ಥಾನಗಳನ್ನು ದಾಖಲಿಸಲು ಕಾರಣವಾಗಿದೆ. ಅದರಲ್ಲೂ ಕರಾವಳಿ ಪ್ರದೇಶದಲ್ಲಿ ಬಹುತೇಕ ಎಲ್ಲಾ ಸ್ಥಾನಗಳನ್ನು ಭಾರತೀಯ ಜನತಾ ಪಕ್ಷ ದಾಖಲಿಸಿಕೊಳ್ಳುವ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕಾರ್ಯ ತಂತ್ರ ಸಖತ್ ವರ್ಕೌಟ್ ಆಗಿದೆ.

ಎಲ್ಲಾ ಮೋದಿಮಯ ಅನ್ನೋದು ಮಾತ್ರ ಸುಳ್ಳಲ್ಲ. ಸಮೀಕ್ಷೆಗಳ ಪ್ರಕಾರ 60 ರಿಂದ 90 ಸ್ಥಾನದಲ್ಲಿದ್ದ ಭಾರತೀಯ ಜನತಾ ಪಕ್ಷದ ಶಾಸಕರ ಸ್ಥಾನಗಳು ಪ್ರಧಾನಿ ನರೇಂದ್ರ ಮೋದಿ ಜಾಥಾವನ್ನು ನಡೆಸಿದೆ ನಂತರ ಏಕಾಏಕಿ 110 ರಿಂದ 140ಕ್ಕೆ ಏರಿದ್ದೂ ಇದೆ. ಹೀಗಾಗಿ ಮೋದಿ ಮೇನಿಯಾ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಭಾರೀ ಸದ್ದು ಮಾಡಿದೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ.

ಒಟ್ಟಾರೆ ನಾಳೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಾರೆ ಹಾಗೂ ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ ಎನ್ನಲಾಗುತ್ತಿದೆ. ಈ ಮೂಲಕ ಗೊಂದಲದ ವಾತಾವರಣದಲ್ಲಿರುವ ಕರ್ನಾಟಕದ ರಾಜಕೀಯ ಪರಿಸ್ಥಿತಿ ತಿಳಿಯಾಗುವ ಎಲ್ಲಾ ಸಾಧ್ಯತೆಗಳೂ ಇದೆ ಎನ್ನಲಾಗುತ್ತಿದೆ.

-ಸುನಿಲ್ ಪಣಪಿಲ

10K Shares
Tags

Related Articles

FOR DAILY ALERTS
Close