ಅಂಕಣಪ್ರಚಲಿತ

ರಾಷ್ಟ್ರೀಯ ವಿಜ್ಞಾನ ದಿನದ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ?! ಈ ದಿನದ ಬಗ್ಗೆ ನಿಮಗೆಷ್ಟು ಗೊತ್ತು?!

ಪ್ರತಿ ವರ್ಷ ಫೆಬ್ರವರಿ 28ರಂದು ನಾವು ಭಾರತೀಯರು `ವಿಜ್ಞಾನ ದಿನ’ವನ್ನು ಆಚರಿಸುತ್ತೇವೆ. ಏಕೆಂದರೆ ಫೆಬ್ರವರಿ 28 ಅನ್ನೋದು `ರಾಮನ್ ಎಫೆಕ್ಟ್’ ಪ್ರಕಟವಾದ ದಿನ. ಬೆಳಕಿನ ಪ್ರತಿಫಲನದ ಕುರಿತು ಬೆಂಗಳೂರಿನ ಪ್ರೊ. ಸಿ.ವಿ. ರಾಮನ್ ನಡೆಸಿದ ಆ ಸಂಶೋಧನೆಗೆ `ರಾಮನ್ ಎಫೆಕ್ಟ್’ ಅಂತಲೇ ಜಾಗತಿಕ ಖ್ಯಾತಿ ಬಂದಿದೆ!! ಅಷ್ಟೇ ಅಲ್ಲ, ಅವರಿಗೆ ಹಾಗೂ ನಮ್ಮ ದೇಶಕ್ಕೆ ವಿಜ್ಞಾನದ ಮೊದಲ ನೊಬೆಲ್ ಪ್ರಶಸ್ತಿಯನ್ನೂ ಅದು ತಂದು ಕೊಟ್ಟಿದೆ. ಅದರ ನೆನಪಿಗಾಗಿ ಫೆಬ್ರವರಿ 28ನ್ನು `ರಾಷ್ಟ್ರೀಯ ವಿಜ್ಞಾನ ದಿನ’ವನ್ನಾಗಿ ಆಚರಿಸಲಾಗುತ್ತಿದೆ.

ವೈಜ್ಞಾನಿಕ ಮನೋಭಾವ ನಮ್ಮ ಬದುಕಿನಲ್ಲಿ ಹಾಸು ಹೊಕ್ಕಾಗಿರಬೇಕು ಎಂಬ ಅಂಶವನ್ನು ನಾವು ಭಾರತೀಯರು ನಮ್ಮ ಸಂವಿಧಾನದಲ್ಲೇ ಅಳವಡಿಸಿಕೊಂಡಿದ್ದೇವೆ. ಅದನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ದಿನ ಫೆಬ್ರವರಿ 28.!! ನೆನಪಿಡಬೇಕಾದ ಸಂಗತಿ ಏನೆಂದರೆ, ಫೆಬ್ರುವರಿ 28 (1928) ಸರ್ ಸಿ.ವಿ. ರಾಮನ್ನರ ಹುಟ್ಟುಹಬ್ಬ ಅಲ್ಲ, ಆದರೆ ಅವರ ಆ ಮಹತ್ವದ ಸಂಶೋಧನೆ ಪ್ರಕಟವಾದ ದಿನ.!!

ಅದು ಪ್ರಕಟವಾಗಿ ಎರಡು ವರ್ಷಗಳ ನಂತರ, 1930ರಲ್ಲಿ ಸರ್ ರಾಮನ್ ಅವರಿಗೆ ನೊಬೆಲ್ ಪ್ರಶಸ್ತಿಯನ್ನು ಘೋಷಿಸಲಾಯಿತು.!! ಹಾಗಾಗಿ ಫೆಬ್ರವರಿ 28 ಸಿ.ವಿ ರಾಮನ್‍ರನ್ನು ಮತ್ತು ವಿಜ್ಞಾನವನ್ನು ಗೌರವಿಸಬೇಕಾದ ದಿನ. ಪ್ರತಿ ವರ್ಷ ಫೆಬ್ರವರಿ 28ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶವಾಗಿದೆ!!

ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ ವಿ ರಾಮನ್ ಅವರ ಅಪೂರ್ವ ಸಾಧನೆಯ ನೆನಪಿನಲ್ಲಿ ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನ ಎಂದು ಗುರುತಿಸಲಾಗಿದೆ. ಅವರು 1928ರ ಫೆಬ್ರವರಿ 28ರಂದು ‘ರಾಮನ್ ಇಫೆಕ್ಟ್’ ಎಂದೇ ಪ್ರಸಿದ್ಧವಾದ ತಮ್ಮ ಅಧ್ಯಯನದ ವಿವರಗಳನ್ನು ಜಗತ್ತಿಗೆ ತಿಳಿಸಿದ್ದರು. ವಿಜ್ಞಾನದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಏಷ್ಯಾದ ಮೊತ್ತಮೊದಲ ವಿಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿ ವಿ ರಾಮನ್ ಅವರ ಪೂರ್ಣ ಹೆಸರು ಚಂದ್ರಶೇಖರ ವೆಂಕಟರಾಮನ್ ಎಂದು. ಅವರು ಜನಿಸಿದ್ದು ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ, 1888ರ ನವೆಂಬರ್ 7ರಂದು.!! ಅವರ ತಂದೆ ಚಂದ್ರಶೇಖರ ಅಯ್ಯರ್ ಗಣಿತ ಹಾಗೂ ಭೌತವಿಜ್ಞಾನದ ಶಿಕ್ಷಕರಾಗಿದ್ದರು.

ಅಂದಿನ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ತಮ್ಮ ಶಿಕ್ಷಣ ಮುಗಿಸಿದ ರಾಮನ್, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉನ್ನತ ಸ್ಥಾನ ಗಳಿಸುವ ಮೂಲಕ ಕಲ್ಕತ್ತೆಯಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಜನರಲ್ ಆಗಿ ನೇಮಕಗೊಂಡರು. ಸರಕಾರದಲ್ಲಿ ಉನ್ನತ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೂ ಅವರಲ್ಲಿ ವಿಜ್ಞಾನದ ಕಡೆಗಿನ ತುಡಿತ ಹಾಗೆಯೇ ಉಳಿದಿತ್ತು. ಅದರ ಪರಿಣಾಮವಾಗಿ ಅವರು ತಮ್ಮ ಹುದ್ದೆಯನ್ನು ತ್ಯಜಿಸಿ ಕಲ್ಕತ್ತಾ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದರು, ಮುಂದೆ ಇಂಡಿಯನ್ ಇನ್ಸ್‍ಟಿಟ್ಯೂಟ್ ಆಫ್ ಸೈನ್ಸ್ ನಿರ್ದೇಶಕರಾಗಿ ಬೆಂಗಳೂರಿಗೆ ಬಂದವರು ತಮ್ಮ ಕೊನೆಯ ಉಸಿರಿನ ತನಕ ವಿವಿಧ ಸಂಶೋಧನೆಗಳಲ್ಲಿ ಮಗ್ನರಾಗಿದ್ದರು.

Image result for cv raman

ರಾಮನ್ ಪರಿಣಾಮ:

ಒಮ್ಮೆ ಹಡಗಿನಲ್ಲಿ ಪ್ರಯಾಣಿಸುವಾಗ ರಾಮನ್ ಅವರಿಗೆ ಸಮುದ್ರ ಏಕೆ ಯಾವಾಗಲೂ ನೀಲಿಯಾಗಿಯೇ ಕಾಣುತ್ತದೆ ಎಂಬ ಪ್ರಶ್ನೆ ಎದುರಾಯಿತಂತೆ. ಅದು ಆಕಾಶದ ಬಣ್ಣದ ಪ್ರತಿಫಲನವೋ ಅಥವಾ ಈ ನೀಲಿ ಬಣ್ಣದ ಹಿಂದೆ ಬೇರೇನಾದರೂ ಗುಟ್ಟು ಅಡಗಿದೆಯೋ ಎಂದು ಪತ್ತೆ ಮಾಡಲು ಹೊರಟ ಸರ್ ಸಿ.ವಿ ರಾಮನ್ ಸೂರ್ಯನ ಬೆಳಕು ನೀರಿನಲ್ಲಿ ಚದುರಿಹೋಗುವುದೇ ಸಮುದ್ರದ ನೀರು ನೀಲಿಯಾಗಿ ಕಾಣಲು ಕಾರಣ ಎಂಬ ವಿಷಯವನ್ನು ಕಂಡುಹಿಡಿದರು.

ಇದೇ ಅಂಶ ಮುಂದೆ ಅವರು ತಮ್ಮ ಅಧ್ಯಯನವನ್ನು ಮುಂದುವರೆಸಲು ಪ್ರೇರಣೆಯಾಯಿತು. ಕೋಲ್ಕತಾದ ಇಂಡಿಯನ್ ಅಸೋಸಿಯೇಷನ್ ಫಾರ್ ಕಲ್ಟಿವೇಷನ್ ಆಫ್ ಸೈನ್ಸ್‍ನಲ್ಲಿ ರಾಮನ್ ಅವರು ತಮ್ಮ ಸಹೋದ್ಯೋಗಿಗಳೊಡನೆ ನಡೆಸಿದ ಅಧ್ಯಯನಗಳ ಪರಿಣಾಮವೇ ರಾಮನ್ ಪರಿಣಾಮದ ಶೋಧ. ಇದೇ ಸಾಧನೆಗಾಗಿ ಅವರಿಗೆ 1930ನೇ ಇಸವಿಯಲ್ಲಿ ನೊಬೆಲ್ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದು ವಿಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ದೊರೆತ ಮೊತ್ತಮೊದಲ ನೊಬೆಲ್ ಪುರಸ್ಕಾರವೂ ಹೌದು.!!

ರಾಷ್ಟ್ರೀಯ ವಿಜ್ಞಾನ ದಿನಕ್ಕೆ ಶುಭ ಕೋರಿದ ಮೋದಿ!!

ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಕೋರಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಅವರು, ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಶುಭಾಶಯವನ್ನು ಕೋರಿದ್ದಾರೆ… ಅವರ ವೈಜ್ಞಾನಿಕ ಕೆಲಸಗಳನ್ನು ವಿಸ್ತರಿಸಲು ಅವರಿಗೆ ಶುಭಕೋರುತ್ತೇನೆ ಎಂದಿದ್ದಾರೆ. ವಿಜ್ಞಾನಿಗಳ ಬಗ್ಗೆ ಭಾರತಕ್ಕೆ ಅಪಾರವಾದ ಹೆಮ್ಮೆಯಿದೆ ಎಂದಿದ್ದಾರೆ..

ಕಳೆದ ಮನ್ ಕಿ ಬಾತ್ ನಲ್ಲಿ ವಿಜ್ಞಾನ ಬಗ್ಗೆ ಮಾತನಾಡಿದ್ದು ತಮ್ಮ ಮನ್ ಕಿ ಬಾತ್ ನ 41ನೇ ಆವೃತ್ತಿಯಲ್ಲಿ ಕಳೆದ 25ರಂದು ಮಾತನಾಡಿದ ಪ್ರಧಾನಿ ಮೋದಿ, ಭೌತವಿಜ್ಞಾನಿ ಸಿ.ವಿ.ರಾಮನ್ ಸೇರಿದಂತೆ ವಿಜ್ಞಾನ ಕ್ಷೇತ್ರದಲ್ಲಿ ಪ್ರಮುಖ ಕೊಡುಗೆದಾರರಿಗೆ ನಮನಗಳು ಎಂದಿದ್ದಾರೆ ಇವರ ಗೌರವಾರ್ಥ ವಿಜ್ಞಾನ ದಿನವನ್ನು ಆಚರಿಸಲಾಗುತ್ತಿದೆ. ಇಡೀ ವಿಜ್ಞಾನ ಸಮುದಾಯಕ್ಕೆ ಅಭಿನಂದನೆಗಳು ಎಂದಿದ್ದರು…ಹೀಗೆ ಸಿ.ವಿ ರಾಮನ್‍ರವರನ್ನು ಪ್ರಧಾನಿ ನರೇಂದ್ರ ಮೋದಿಯವರು ನೆನೆದರು..

 

ಪವಿತ್ರ

Tags

Related Articles

FOR DAILY ALERTS
 
FOR DAILY ALERTS
 
Close