ಪ್ರಚಲಿತ

ರೈತರ ಆಕ್ರೋಶಕ್ಕೆ ಬೆಚ್ಚಿಬಿದ್ದ ಸಿಎಂ ಕುಮಾರಸ್ವಾಮಿ.! ಮೈತ್ರಿ ಸರಕಾರವನ್ನೇ ಉರುಳಿಸುವ ಎಚ್ಚರಿಕೆ ನೀಡಿದ ಅನ್ನದಾತರು..!

ರೈತರು ಆಕ್ರೋಶಗೊಂಡರೆ ಪರಿಣಾಮ ಯಾವ ರೀತಿಯಲ್ಲಿ ಬೀರುತ್ತದೆ ಎಂಬುದು ಪ್ರತಿಯೊಂದು ಪಕ್ಷಗಳಿಗೂ ಈಗಾಗಲೇ ಮನವರಿಕೆ ಆಗಿದೆ. ಆದ್ದರಿಂದಲೇ ಯಾವ ಪಕ್ಷ ಅಧಿಕಾರಕ್ಕೆ ಬಂದರು ಮೊದಲು ರಾಜ್ಯದ ರೈತರ ಬಗ್ಗೆ ಯೋಚಿಸಿ ಅವರಿಗೆ ಬೇಕಾದ ಸವಲತ್ತುಗಳನ್ನು ಸರಕಾರದ ವತಿಯಿಂದ ಒದಗಿಸುತ್ತಾರೆ. ಆದರೆ ಸದ್ಯ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಮ್ಮಿಶ್ರ ಸರಕಾರ ಮಾತ್ರ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂಬುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಿಸಿದ ತಮ್ಮ ಮೊದಲ ಬಜೆಟ್ ಪ್ರತ್ಯಕ್ಷ ಸಾಕ್ಷಿ.

 

ರೈತರ ಬೇಡಿಕೆ ಒಂದೇ, ತಾವು ಮಾಡಿರುವ ಕೃಷಿ ಸಾಲವನ್ನು ಮನ್ನಾ ಮಾಡಬೇಕೆಂದು. ಆದರೆ ಚುನಾವಣೆಗೂ ಮೊದಲು ಅಧಿಕಾರಕ್ಕೆ ಬಂದ ಕೂಡಲೇ ನಮ್ಮ ಸರಕಾರದ ಮೊದಲ ಕೆಲಸವೇ ರೈತರ ಸಾಲಮನ್ನಾ ಎಂದು ಹೇಳಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಕೈಗೆ ಅಧಿಕಾರಕ್ಕೆ ಬಂದ ನಂತರ ಈ ಬಗ್ಗೆ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆ ತಮ್ಮ ಮಾತುಗಳನ್ನೆಲ್ಲಾ ಮರೆತಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಮಾತು ಮರೆತಿರಬಹುದು, ಆದರೆ ರಾಜ್ಯದ ಜನರು ಮರೆತಿಲ್ಲ. ಅದಕ್ಕಾಗಿಯೇ ರಾಜ್ಯ ಸರಕಾರದ ವಿರುದ್ಧ ಆಕ್ರೋಶಗೊಂಡ ರೈತರು ಸಮ್ಮಿಶ್ರ ಸರಕಾರವನ್ನೇ ಕಿತ್ತು ಹಾಕುವ ಎಚ್ಚರಿಕೆ ನೀಡಿದ್ದಾರೆ.!

ಕಳೆದ ಎರಡು ದಿನಗಳಿಂದ ರಾಜ್ಯದ ನಾನಾ ಜಿಲ್ಲೆಗಳಿಂದ ಬೆಂಗಳೂರಿಗೆ ಆಗಮಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಸಂಪೂರ್ಣ ಸಾಲಮನ್ನಾ ಮಾಡಲೇಬೇಕೆಂಬ ಆಗ್ರಹವನ್ನು ಸರಕಾರದ ಮುಂದಿಟ್ಟಿದ್ದಾರೆ. ಆದರೆ ಇತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು , ಸಂಪೂರ್ಣ ಸಾಲಮನ್ನಾ ಮಾಡಲು ಸದ್ಯ ಕಷ್ಟ , ಸರಕಾರ ಕೂಡ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಈ ಘಟನೆಯಿಂದ ಜಾರಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ರೈತರ ಆಕ್ರೋಶದ ಕಟ್ಟೆ ಒಡೆದಿದ್ದು, ಇಂದು ಮತ್ತೆ ಸಾವಿರಾರು ಸಂಖ್ಯೆಯಲ್ಲಿ ರೈತರು ಬೆಂಗಳೂರಿಗೆ ಆಗಮಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.!

ಸಂಪೂರ್ಣ ಸಾಲಮನ್ನಾ ಮತ್ತು ಮಹದಾಯಿ ಬೇಡಿಕೆ ಇಟ್ಟ ಅನ್ನದಾತರು..!

ಕೃಷಿಗೆ ಸಂಬಂಧಿಸಿದ ಬ್ಯಾಂಕ್ ಸಾಲಮನ್ನಾ ಮಾಡಬೇಕೆಂಬ ಕೂಗು ಕೇಳುತ್ತಲೇ ಇದ್ದರೂ , ರಾಜ್ಯ ಸರಕಾರ ಮಾತ್ರ ರೈತರ ವಿಚಾರದಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಇದರಿಂದ ಸಾಕಷ್ಟು ಬಾರಿ ರೈತರು ಮನವಿ ಮಾಡಿಕೊಂಡರು ಕೂಡ ಯಾವುದೇ ಪ್ರಯೋಜನವಾಗಲಿಲ್ಲ. ಅದಕ್ಕಾಗಿಯೇ ಆಕ್ರೋಶಗೊಂಡ ರೈತರ ದಂಡು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ರಾಜ್ಯ ಸರಕಾರ ಅಕ್ಷರಶಃ ತತ್ತರಿಸಿದೆ. ಈಗಾಗಲೇ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದ ನಂತರ ೬-೭ ರೈತರು ಸಾಲಭಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದ ರೈತರ ಆಕ್ರೋಶ ತಾರಕಕ್ಕೇರಿದೆ. ಈ ಹಿಂದಿನ ಸಿದ್ದರಾಮಯ್ಯ ಸರಕಾರದಲ್ಲೂ ಇದೇ ರೀತಿ ಸಾವಿರಾರು ರೈತರು ಪ್ರಾಣ ಕಳೆದುಕೊಂಡಿದ್ದು ಕುಮಾರಸ್ವಾಮಿ ಸರಕಾರದಲ್ಲೂ ಇದೇ ಮುಂದುವರಿಯುತ್ತಿದೆ. ಆದ್ದರಿಂದ ಸರಕಾರ ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೆ ರಾಜ್ಯ ಸರಕಾರದ ಅಂತ್ಯ ಖಂಡಿತ ಎಂದು ರೈತರು ಗುಡಿಗಿದ್ದಾರೆ.!

ಈಗಾಗಲೇ ಹುಬ್ಬಳ್ಳಿಗಳಿಂದ ಕೂಡ ಸಾವಿರಾರು ಸಂಖ್ಯೆಯಲ್ಲಿ ರೈತರು ಬೆಂಗಳೂರಿಗೆ ಆಗಮಿಸಿದ್ದು, ಮೆಜೆಸ್ಟಿಕ್‌ನಿಂದ ಫ್ರೀಡಂ ಪಾರ್ಕ್‌ಗೆ ಪ್ರತಿಭಟನಾ ಜಾತ ಹಮ್ಮಿಕೊಂಡಿದ್ದಾರೆ. ಸರಕಾರ ಸಂಪೂರ್ಣ ಸಾಲಮನ್ನಾ ಮತ್ತು ಮಹದಾಯಿ ವಿಚಾರದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳದೇ ಹೋದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ರೈತ ಮುಖಂಡರು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ..!

–ಅರ್ಜುನ್

Tags

Related Articles

FOR DAILY ALERTS
 
FOR DAILY ALERTS
 
Close