ಪ್ರಚಲಿತ

ಬ್ರೇಕಿಂಗ್! ರಾಜಕೀಯ ನಿವೃತ್ತಿ ಘೋಷಿಸಿದ ಯಡಿಯೂರಪ್ಪ!? ಕುಮಾರಸ್ವಾಮಿ ಬಿಡುಗಡೆ ಮಾಡಿದ ಆಡಿಯೋ‌ ಸಾಬೀತಾದರೆ ಬಿಎಸ್‌ವೈ ರಾಜಕೀಯದಿಂದ ದೂರ!

ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮೈತ್ರಿ ಸರಕಾರದ ಗದ್ದಲದ ನಡುವೆ ಇಂದು ಮತ್ತೆ ಹೊಸ ಆಟ ಆರಂಭವಾಗಿದೆ. ಬಿಜೆಪಿಯವರು ಆಪರೇಷನ್ ಕಮಲ ಮಾಸುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿ ನಾಯಕರ ವಿರುದ್ಧ ಭಾರೀ ಆರೋಪ ಮಾಡಿದ್ದರು. ಆದರೆ ಬಿಜೆಪಿ ನಾಯಕರು ತಮ್ಮ ಮೇಲಿನ ಆರೋಪವನ್ನು ಅಲ್ಲಗಳೆಯುತ್ತಲೇ ಬಂದಿದ್ದರು. ಆದರೆ ‌ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದು, ಸ್ವತಃ ಬಿ ಎಸ್ ಯಡಿಯೂರಪ್ಪನವರೇ ಕಾಂಗ್ರೆಸ್ ಮತ್ತು ಜೆಡಿಎಸ್‌ ಶಾಸಕರ ಮನವೊಲಿಕೆಗೆ ಪ್ರಯತ್ನಿಸಿದ್ದರು ಎಂದು ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಒಂದು ಆಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ. ಬಿಜೆಪಿ ನಾಯಕರು ಏನೂ ಮಾಡುತ್ತಿಲ್ಲ ಎನ್ನುತ್ತಲೇ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿದ್ದರು. ಈ ಬಗ್ಗೆ ನಮ್ಮ ಬಳಿ ಸಾಕ್ಷಿ ಕೂಡ ಇದೆ, ಯಡಿಯೂರಪ್ಪನವರು ಈ ರೀತಿ ಕೀಳು ರಾಜಕೀಯ ಮಾಡುವುದು ಅವರಿಗೆ ಅವಮಾನಕರ ವಿಚಾರ ಎಂದಿದ್ದಾರೆ.!

ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಎಸ್ ಯಡಿಯೂರಪ್ಪ, ಸುಳ್ಳು ಹೇಳಿಕೊಂಡೇ ಅಧಿಕಾರ ಹಿಡಿದವರು ಕುಮಾರಸ್ವಾಮಿ, ಅವರ ಮಾತಿಗೆ ಕಿಮ್ಮತ್ತು ಬೆಲೆಯಿಲ್ಲ ಎಂದು ತಿಳಿದು ಈ ರೀತಿ ನಮ್ಮ ಮೇಲೆ ಆರೋಪ ಮಾಡಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿದ ಆಡಿಯೋ‌ ಸಾಬೀತು ಪಡಿಸಿದರೆ ನಾನು ರಾಜಕೀಯ ಜೀವನದಿಂದಲೇ ನಿವೃತ್ತಿ ಹೊಂದುತ್ತೇನೆ, ಕುಮಾರಸ್ವಾಮಿ ಅವರಿಗೆ ಸವಾಲು ಸ್ವೀಕರಿಸಲು ತಾಕತ್ತು ಇದೆಯಾ ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರೇ ಸ್ವತಃ ಪಕ್ಷ ತೊರೆಯಲು ಸಿದ್ಧರಾಗಿದ್ದಾರ, ನಾವು ಯಾವುದೇ ಆಪರೇಷನ್ ನಡೆಸುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.!

ಇತ್ತ ಸಿಎಂ ಕುಮಾರಸ್ವಾಮಿ ಅವರು ನೇರಾನೇರ ಬಿಜೆಪಿಯವರ‌ ವಿರುದ್ಧ ಆರೋಪ ಮಾಡಿದ್ದು, ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ವಿರುದ್ಧ ಆಪರೇಷನ್ ಕಮಲದ ಬಗ್ಗೆ ಕಿಡಿಕಾರಿದ್ದಾರೆ. ಇದಕ್ಕೆ ಪೂರಕವಾಗುವಂತೆ ಆಡಿಯೋ ಕೂಡ ರಿಲೀಸ್ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಒಂದು ರೀತಿಯ ಸಂಚಲನ ಮೂಡಿಸಿದೆ. ಯಾಕೆಂದರೆ ಬಿಜೆಪಿ ನಾಯಕರು ಆಪರೇಷನ್ ಕಮಲದ ಬಗ್ಗೆ ಈಗಲೂ ಯಾವುದೇ ಮಾಹಿತಿ ನೀಡಿಲ್ಲ ಮತ್ತು ಆಪರೇಷನ್ ಕಮಲ ನಡೆಸಿಯೇ ಇಲ್ಲ ಎಂದು ಖಡಾಖಂಡಿತವಾಗಿ ಹೇಳುತ್ತಿದ್ದಾರೆ. ಇಷ್ಟಾದರೂ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿದ ಆಡಿಯೋ ಯಾರದು ಎಂದು ತಿಳಿದಿಲ್ಲ. ಕುಮಾರಸ್ವಾಮಿ ಅವರು ಈ ಆಡಿಯೋ ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ ಯಡಿಯೂರಪ್ಪನವರ ಸವಾಲಿಗೆ ಕುಮಾರಸ್ವಾಮಿ ಅವರು ಏನು ಮಾಡುತ್ತಾರೆ ಎಂಬುದು ಕಾದು ನೋಡಬೇಕಿದೆ.!

-ಅರ್ಜುನ್

Tags

Related Articles

FOR DAILY ALERTS
 
FOR DAILY ALERTS
 
Close